ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬಹುದು: ಆದರೆ‌...

ನವದೆಹಲಿ: 2024ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬಹುದು. ಆದ್ರೆ ಅದು ಪ್ರತಿಪಕ್ಷಗಳಿಂದ ಹಾಗೂ ಮೈತ್ರಿಕೂಟಗಳಿಂದ ಸಾಧ್ಯವಿಲ್ಲ ಎಂದು ಚುನಾವಣಾ ಕಾರ್ಯತಂತ್ರ ಸಲಹೆಗಾರ, ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಬಿಜೆಪಿಯನ್ನು ಸೋಲಿಸಲು ಬಯಸುವ ಯಾವುದೇ ಪಕ್ಷ ಅಥವಾ ನಾಯಕ 5ರಿಂದ 10 ವರ್ಷಗಳ ದೃಷ್ಟಿಕೋನ ಹೊಂದಿರಬೇಕು. ಬಿಜೆಪಿಯೇತರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ 200 ಲೋಕಸಭೆ ಕ್ಷೇತ್ರಗಳಲ್ಲಿ ಅಪಾರ ಜನಪ್ರಿಯತೆ ನಡುವೆಯೂ ಬಿಜೆಪಿ ಕೇವಲ 50 ಸ್ಥಾನಗಳನ್ನು ಗೆಲ್ಲಬಹುದು ಎಂದಿದ್ದಾರೆ.

ಇನ್ನು ಮೈತ್ರಿ ಮಾಡಿಕೊಳ್ಳಲು ಬಯಸುವ ಯಾವುದೇ ಪಕ್ಷಗಳು ತಮ್ಮನ್ನು ತಾವು ಮರುಸ್ಥಾಪನೆ ಮಾಡಿಕೊಳ್ಳಬೇಕು. ತಮ್ಮಲ್ಲಿನ ಸಂಪನ್ಮೂಲ, ತಂತ್ರಗಾರಿಕೆಯನ್ನು ಬಲಪಡಿಸಿಕೊಳ್ಳಬೇಕು. ಹೀಗೆ ಮಾಡಿದ್ರೆ ಈಗಿನ ವಿರೋಧ ಪಕ್ಷಗಳು 250ರಿಂದ 260 ಸ್ಥಾನಗಳನ್ನು ಗೆಲ್ಲಲು ಸಾಧ್ಯವಿದೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

25/01/2022 08:32 pm

Cinque Terre

45.76 K

Cinque Terre

22