ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಂ.ಬಿ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಎಂ.ಬಿ ಪಾಟೀಲ್ ಅವರನ್ನು ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ರನ್ನಾಗಿ ನೇಮಕ ಮಾಡುವುದಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ಮಂಗಳವಾರ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಎಂ.ಬಿ ಪಾಟೀಲ್ ಈ ಹಿಂದೆ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಜಲಸಂಪನ್ಮೂಲ ಸಚಿವರಾಗಿ ಕೆಲಸ ಮಾಡಿದ್ದರು. ಹೆಚ್.ಡಿ ಕುಮಾರಸ್ವಾಮಿ ಸಂಪುಟದಲ್ಲಿ ಗೃಹ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.
PublicNext
25/01/2022 08:41 pm