ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದೆ. ಈ ಮಧ್ಯೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ರಾಜಕೀಯ ಬದ್ಧವೈರಿಗಳ ಜೊತೆ ಜೆಡಿಎಸ್ ಶಾಸಕ ಸಿ.ಎಸ್. ಪುಟ್ಟರಾಜು ಕಾಣಿಸಿಕೊಂಡಿರುವುದು ರಾಜಕೀಯ ವಲಯಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಇತ್ತೀಚಿನ ದಿನಗಳಲ್ಲಿ ಜೆಡಿಎಸ್ ನಾಯಕರ ಜೊತೆ ಅಂತರ ಕಾಯ್ದುಕೊಂಡಿರುವ ಸಿ.ಎಸ್.ಪುಟ್ಟರಾಜು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಸಿದ್ದರಾಮಯ್ಯ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ಸಿ.ಎಸ್ ಪುಟ್ಟರಾಜು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಾರಾ ಎನ್ನುವ ಚರ್ಚೆ ಹುಟ್ಟಿಕೊಂಡಿದೆ.
PublicNext
28/01/2022 07:36 am