ಪಣಜಿ: ಗೋವಾದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ರಾಣೆ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ರಾಣೆ ಅವರಿಗೆ ಪೊರಿಯಂ ಕ್ಷೇತ್ರದಿಂದ ರಾಣೆ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಇದೇ ಕ್ಷೇತ್ರದಿಂದ ಅವರು ಸತತ 11 ಬಾರಿ ಬಾರಿ ಗೆಲುವು ಸಾಧಿಸಿದ್ದರು. ಆದರೆ ಏಕಾಏಕಿ ಚುನಾವಣಾ ಕಣದಿಂದ ಹಿಂದೆ ಸರಿದಿರುವುದು ಕಾಂಗ್ರೆಸ್‌ಗೆ ಬಿಗ್ ಶಾಕ್ ನೀಡಿದಂತಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರತಾಪ್ ಸಿಂಗ್ ರಾಣೆ ಅವರು, ಕುಟುಂಬಸ್ಥರ ಒತ್ತಡದಿಂದಾಗಿ ಕಣದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಹೇಳಿದ್ದಾರೆ.
ಪೊರಿಯಂ ಕ್ಷೇತ್ರದಿಂದ ರಾಣೆ ಅವರ ಸೊಸೆ ದಿವ್ಯ ವಿಶ್ವಜಿತ್ ರಾಣೆ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಬೆನ್ನಲ್ಲೇ ಕಣದಿಂದ ಹಿಂದೆ ಸರಿಯುವುದಾಗಿ ಪ್ರತಾಪ್ ಸಿಂಗ್ ರಾಣೆ ಹೇಳಿದ್ದಾರೆ. ಗೋವಾದ ಅತೀ ದೀರ್ಘವಾದಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ರಾಣೆ ಅವರು, ಮತದಾನಕ್ಕೆ ಕೆಲ ದಿನಗಳು ಮಾತ್ರ ಬಾಕಿ ಇರುವಾಗಲೇ ಕಣದಿಂದ ಹಿಂದೆ ಸರಿದಿದ್ದು, ಕಾಂಗ್ರೆಸ್‌ಗೆ ಮುಜುಗರ ಉಂಟು ಮಾಡಿದೆ.
PublicNext
28/01/2022 08:48 am