ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಎಂ ಬೊಮ್ಮಾಯಿಗೆ ಜನ್ಮದಿನದ ಶುಭಕೋರಿದ ಪ್ರಧಾನಿ ಮೋದಿ

ಬೆಂಗಳೂರು: ಇಂದು 62ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.

ಟ್ವಿಟರ್ ಮಾಡಿರುವ ಪ್ರಧಾನಿ ಮೋದಿ, 'ಬೊಮ್ಮಾಯಿ ಅವರು ಕರ್ನಾಟಕದ ಬೆಳವಣಿಗೆಗೆ ಒಳ್ಳೆಯ ಆಡಳಿತ ನೀಡುವ ಮೂಲಕ ಸಾಕಷ್ಟು ಶ್ರಮಿಸುತ್ತಿದ್ದಾರೆ. ಆ ಮೂಲಕ ನಾಡಿನ ಬೆಳವಣಿಗೆಯ ಪಥವನ್ನು ಹೆಚ್ಚಿಸುತ್ತಾ ಬಡವರ, ಶ್ರಮಿಕರ ಏಳಿಗೆಗಾಗಿ ಯತ್ನಿಸುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಮತ್ತು ದೇವರು ಅವರಿಗೆ ಉತ್ತಮ, ಆರೋಗ್ಯ, ದೀರ್ಘಾಯುಷ್ಯವನ್ನು ನೀಡಲಿ ಎಂದು ಕೋರುತ್ತೆನೆ' ಎಂದು ವಿಶ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿ, 'ನಿಮ್ಮ ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ನಾನು ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲು ಸಾಧ್ಯವಾಗುತ್ತಿದೆ. ಆ ಮೂಲಕ ಬಡವರ, ಶ್ರಮಿಕರ, ದೀನದಲಿತರ ಏಳಿಗೆಗಾಗಿ ಶ್ರಮಿಸುತ್ತಿದ್ದೇನೆ. ನನ್ನ ಈ ಕೆಲಸಗಳಿಗೆ ಸ್ಫೂರ್ತಿ ನೀವು, ಧನ್ಯವಾದಗಳು' ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

28/01/2022 11:02 am

Cinque Terre

76.24 K

Cinque Terre

13

ಸಂಬಂಧಿತ ಸುದ್ದಿ