ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸೇರಿದಂತೆ ಅನೇಕ ರಾಜಕೀಯ ನಾಯಕರು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರಿಗೆ ಶುಕ್ರವಾರ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.
ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ (30) ಅವರ ಮೃತದೇಹ ಶುಕ್ರವಾರ ನೇಣು ಬಿಗಿದ ಸ್ಥಿತಿಯಲ್ಲಿ ಬೆಂಗಳೂರಿನ ಅವರ ಫ್ಲ್ಯಾಟ್‌ನಲ್ಲಿ ಪತ್ತೆಯಾಗಿತ್ತು. ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಬಿಎಸ್‌ವೈ ಅವರಿಗೆ ಕರೆ ಮಾಡಿದ ಪ್ರಧಾನಿ ಮೋದಿ, ಸಾಂತ್ವನ ಹೇಳಿದರು. ಈ ನೋವಿನ ಸಂದರ್ಭದಲ್ಲಿ ಎದೆಗುಂದದಂತೆ ಸಲಹೆ ನೀಡಿದ್ದಾರೆ.
PublicNext
29/01/2022 07:43 am