ಲಖನೌ: ಉತ್ತರಪ್ರದೇಶದಲ್ಲಿ ಹಿಂದೂ-ಮುಸ್ಲಿಮರನ್ನು ಒಡೆದು ಆಳುವ ನೀತಿ ನಡೆಯುವುದಿಲ್ಲ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖ್ಯಸ್ಥ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಮಾಧ್ಯಮದಗಳೊಂದಿಗೆ ಮಾತನಾಡಿದ ಅವರು, ಯುಪಿಯಲ್ಲಿ ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ, ವಿದ್ಯುತ್ ದರ ಏರಿಕೆಯಿಂದಾಗಿ ಅನ್ನದಾತರು ಸಂಕಷ್ಟ ಅನುಭವಿಸುವಂತ ಸ್ಥಿತಿ ನಿರ್ಮಾಣವಾಗಿದೆ. ಇಂಥ ಸಂದರ್ಭದಲ್ಲಿ ರೈತರ ಸಮಸ್ಯೆಗಳು, ನಿರುದ್ಯೋಗ, ಹಣದುಬ್ಬರದಿಂದ ಮಧ್ಯಮ ವರ್ಗದ ಜನರು ಅನುಭವಿಸುತ್ತಿರುವ ಸಂಕಷ್ಟಗಳು ಚುನಾವಣೆ ವಿಷಯಗಳಾಗಬೇಕು. ಉತ್ತರ ಪ್ರದೇಶದ ಮತದಾರರು ರೈತರ ಏಳ್ಗೆ ಮತ್ತು ಕಲ್ಯಾಣದ ಬಗ್ಗೆ ಮಾತನಾಡುವವರಿಗೆ ಮಾತ್ರ ಮಣೆ ಹಾಕುತ್ತಾರೆಯೇ ವಿನಃ ಧಾರ್ಮಿಕ ನೆಲೆಯಲ್ಲಿ ಮಾತನಾಡುವುದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದು ಟಿಕಾಯತ್ ಹೇಳಿದ್ದಾರೆ.
PublicNext
30/01/2022 08:17 am