ಗಾಜಿಯಾಬಾದ್ (ಉತ್ತರ ಪ್ರದೇಶ): ದೇಶದ ಜನತೆ ಬೆಲೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ತತ್ತರಿಸಿದ್ದಾರೆ. ನಿತ್ಯದ ಅವಶ್ಯಕತೆಗಳನ್ನು ಪೂರೈಸಿಕೊಂಡು ಜೀವನ ನಿರ್ವಹಿಸುವುದು ಸಾಮಾನ್ಯರಿಗೆ ಕಷ್ಟವಾಗಿದೆ. ಈ ಸಲ ಅಮಿತ್ ಶಾ ಮತಯಾಚನೆಗೆ ನಿಮ್ಮ ಮನೆ ಬಳಿ ಬಂದಾಗ ಅವರಿಗೆ ನಿಮ್ಮ ಮನೆಯ ಕೆಂಪು ಸಿಲಿಂಡರ್ ತೋರಿಸಿ ಎಂದು ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದಾರೆ.
ಗಾಜಿಯಾಬಾದ್‌ನಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2014ಕ್ಕೂ ಮುನ್ನ ಬಿಜೆಪಿ ದೇಶದ ಜನರಿಗೆ ಕೊಟ್ಟ ಭರವಸೆಯಂತೆ ಅಧಿಕಾರ ನಡೆಸುತ್ತಿಲ್ಲ. ಆಗ ಗೃಹ ಬಳಕೆ ಸಿಲಿಂಡರ್ ಬೆಲೆ ಎಷ್ಟಿತ್ತು? ಈಗ ಎಷ್ಟಾಗಿದೆ ಎಂಬುದರ ಬಗ್ಗೆ ಜನ ಯೋಚಿಸಿ ಉತ್ತರ ಪ್ರದೇಶ ಚುನಾವಣೆಯಲ್ಲಿ ಮತ ನೀಡಬೇಕು ಎಂದು ಅಖಿಲೇಶ್ ಇದೇ ಸಂದರ್ಭದಲ್ಲಿ ಹೇಳಿದರು.
PublicNext
30/01/2022 10:37 am