ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಹದಿನೈದಕ್ಕೂ ಹೆಚ್ಚು ದುರಹಂಕಾರಿ ಸಚಿವರನ್ನು ವಜಾಗೊಳಿಸಿ: ರೇಣುಕಾಚಾರ್ಯ ಒತ್ತಾಯ...!

ದಾವಣಗೆರೆ: ಶಾಸಕರಿಗೆ ಸುಳ್ಳು ಹೇಳಿಕೊಂಡು, ಜನರ ಕೈಗೆ ಸಿಗದ 15ಕ್ಕೂ ಹೆಚ್ಚು ದುರಹಂಕಾರಿ ಸಚಿವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ‌. ರೇಣುಕಾಚಾರ್ಯ ಒತ್ತಾಯ ಮಾಡಿದ್ದಾರೆ.

ಹೊನ್ನಾಳಿ ಪಟ್ಟಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನು ತಪ್ಪು ಮಾಡಿದ್ದರೆ ಯಾವುದೇ ಶಿಕ್ಷೆ ಕೊಡಲಿ. ಅದಕ್ಕೆ ಸ್ವೀಕರಿಸುತ್ತೇನೆ. ದುರಹಂಕಾರಿ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದೇನೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ಐದು ನಿಮಿಷದಲ್ಲಿ ಸಿಗುತ್ತಿದ್ದರು. ಸಿಎಂ ಆದ ಮೇಲೆ ಬಸವರಾಜ್ ಬೊಮ್ಮಾಯಿ ಅವರೂ ಸ್ಪಂದಿಸುತ್ತಾರೆ. ಕೆಲವು ಸಚಿವರು ಸ್ಪಂದನೆ ಮಾಡುತ್ತಾರೆ. ಸ್ಪಂದಿಸುವ ಹಾಗೂ ಸ್ಪಂದಿಸದ ಸಚಿವರ ಪಟ್ಟಿಯನ್ನೂ ನೀಡಿದ್ದೇನೆ. ಆದ್ರೆ ನಾನು ಲಿಖಿತ ದೂರು ಕೊಟ್ಟಿಲ್ಲ, ಕೊಡುವುದೂ ಇಲ್ಲ.‌ನಾನು ಕರೆ ಮಾಡಿ ಈಗಾಗಲೇ ಸಿಎಂ, ನಳೀನ್ ಕುಮಾರ್ ಕಟೀಲ್, ಅರುಣ್ ಸಿಂಗ್ ಅವರ ಜೊತೆ ಮಾತನಾಡಿದ್ದೇನೆ ಎಂದು ತಿಳಿಸಿದರು‌.

ನಾನು ಬಿಜೆಪಿ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ. ಸಚಿವ, ಶಾಸಕ ಸ್ಥಾನ ದೊಡ್ಡದಲ್ಲ. ಪಕ್ಷದ ಕಾರ್ಯಕರ್ತ ಎನ್ನೋದೇ ದೊಡ್ಡ ಹೆಮ್ಮೆ. 15 ಕ್ಕೂ ಹೆಚ್ಚು ದುರಹಂಕಾರಿ ಸಚಿವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರ ಜೊತೆ ಮಾತನಾಡಿದ್ದೇನೆ. ಅನೇಕ ಬಾರಿ ಹೇಳಿದ್ದೇನೆ. ಕಳೆದ 27ರಂದು ಕರೆ ಬಂದಿದೆ. ಅನೇಕ ಶಾಸಕರು ನನ್ನ ಮುಂದೆ ಭಾವನೆ ವ್ಯಕ್ತಪಡಿಸಿದ್ದಾರೆ. ಕೆಲ ಸಚಿವರು ಕೈಗೆ ಸಿಗ್ತಾ ಇಲ್ಲ, ಫೋನ್ ರಿಸೀವ್ ಮಾಡಲ್ಲ. ಮಾಡಿದರೂ ಸಚಿವರ ಆಪ್ತ ಸಹಾಯಕರು ಸ್ವೀಕರಿಸುತ್ತಾರೆ. ಏನಾದರೂ ಕೆಲಸಕ್ಕೆ ಪತ್ರ ಬರೆದರೆ ಕಾನೂನಾತ್ಮಕ ಪರಿಶೀಲನೆ ಮಾಡುತ್ತೇವೆ ಎಂಬ ಸಬೂಬು ಬರುತ್ತದೆ. ಇದು ಶಾಸಕರ ಕ್ಷೇತ್ರಕ್ಕೆ ಮಾಡಿದ ಅಪಮಾನ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೂ ಹೇಳಿದ್ದೇನೆ ಎಂದರು.

Edited By : Manjunath H D
PublicNext

PublicNext

30/01/2022 03:07 pm

Cinque Terre

51.17 K

Cinque Terre

4

ಸಂಬಂಧಿತ ಸುದ್ದಿ