ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕತ್ತಿ, ಸವದಿ ಕಾಂಗ್ರೆಸ್ ಸೇರ್ಪಡೆ ವದಂತಿ ವಿಚಾರ: ಯಾರೂ ಸಂಪರ್ಕಿಸಿಲ್ಲ ಎಂದ ಸತೀಶ್ ಜಾರಕಿಹೊಳಿ

ದಾವಣಗೆರೆ: ಸಚಿವ ಉಮೇಶ್ ಕತ್ತಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರ್ಪಡೆ ವದಂತಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು, ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರದ ರಾಜನಹಳ್ಳಿಯಲ್ಲಿರುವ ವಾಲ್ಮೀಕಿ ಪೀಠದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅಂಥ ಸನ್ನಿವೇಶ ನಿರ್ಮಾಣ ಆಗಿಲ್ಲ. ಅವರು ಬರುತ್ತಾರೆ ಅಂತ ನಾವೇಗೆ ಹೇಳಲು ಆಗುತ್ತದೆ. ಅವರು ಈಗ ಬೇರೆ ಪಕ್ಷದಲ್ಲಿದ್ದಾರೆ ಎಂದು ತಿಳಿಸಿದರು.

ಬಿಜೆಪಿ-ಜೆಡಿಎಸ್ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಅನ್ನೋ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಯಾರು ಯಾವ ಪಕ್ಷಕ್ಕೆ ಹೋಗ್ತಾರೆ ಅನ್ನೋದಕ್ಕೆ ಇನ್ನೂ ಒಂದು ವರ್ಷ ಬೇಕು. ಮುಂದಿನ ವರ್ಷದ ಫೆಬ್ರವರಿ ಒಂದಕ್ಕೆ ಯಾರು ಎಲ್ಲಿ ಇರ್ತಾರೆ ಅಂತ ಗೊತ್ತಾಗುತ್ತೆ. ಯಾರು ಯಾವ ಪಕ್ಷಕ್ಕೆ ಹೋಗ್ತಾರೆ ಎಂಬುದನ್ನು ಕಾದು ನೋಡಬೇಕು ಎಂದು ಹೇಳಿದರು.

Edited By : Shivu K
PublicNext

PublicNext

31/01/2022 08:54 am

Cinque Terre

59.61 K

Cinque Terre

0