ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಜೆಟ್ ಅಧಿವೇಶನ ಯಶಸ್ವಿಗೊಳಿಸಲು ಸಂಸದರಲ್ಲಿ ಮೋದಿ ಮನವಿ

ಹೊಸದಿಲ್ಲಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ನೆರಳಲ್ಲೇ ನಡೆಯುತ್ತಿರುವ ಕೇಂದ್ರ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ.ಇದಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಪ್ರಧಾನಿ ಮೋದಿ ಕೇಂದ್ರ ಬಜೆಟ್ ಅಧಿವೇಶನಕ್ಕೆ ಎಲ್ಲ ಸಂಸದರ ಸಹಕಾರ ಮುಖ್ಯ ಎಂದಿದ್ದಾರೆ.

ಇದು ಚುನಾವಣೆಯ ಕಾಲ ನಿಜ. ಆದರೆ ಬಜೆಟ್ ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆ ನಡೆಸುವ ಮೂಲಕ ದೇಶದ ಪ್ರಗತಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ದೇಶದ ಒಂದು ವರ್ಷದ ಆರ್ಥಿಕ ಪಥವನ್ನು ನಿರ್ದೇಶಿಸುವ ಬಜೆಟ್ ಅಧಿವೇಶನವನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯ. ಹೀಗಾಗಿ ಬಜೆಟ್ ಅಧಿವೇಶನದಲ್ಲಿ ಎಲ್ಲ ಸಂಸದರೂ ಕ್ರೀಯಾಶೀಲರಾಗಿ ಪಾಲ್ಗೊಳ್ಳಬೇಕು. ನಾವೆಲ್ಲರೂ ಒಗ್ಗಟ್ಟಿನಿಂದ ದೇಶದ ಆರ್ಥಿಕ ಪಥವನ್ನು ಮುನ್ನಡೆಸೋಣ ಎಂದು ಕರೆ ನೀಡಿದರು.

ಇನ್ನು ಇದೇ ವಿಚಾರವಾಗಿ ಮಾತನಾಡಿರುವ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಜೆಟ್ ಅಧಿವೇಶನದಲ್ಲಿ ಚರ್ಚೆಗೆ ನಾವು ಸಿದ್ಧರಿದ್ದೇವೆ. ದೇಶ ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳ ಬಗ್ಗೆ ಸುದೀರ್ಘ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.

Edited By : Nirmala Aralikatti
PublicNext

PublicNext

31/01/2022 11:52 am

Cinque Terre

44.1 K

Cinque Terre

2

ಸಂಬಂಧಿತ ಸುದ್ದಿ