ನವದೆಹಲಿ: ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಸೋಮವಾರ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಕೆಲ ಸಂಸದರು ಕೊರೊನಾ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ.
ಮೊದಲ ಎರಡು ಸಾಲುಗಳಲ್ಲಿ ಕುಳಿತಿದ್ದ ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರದ ಪ್ರಮುಖ ಸಚಿವರು ಮತ್ತು ವಿವಿಧ ಪಕ್ಷಗಳ ನಾಯಕರು ದೈಹಿಕ ಅಂತರ ಕಾಪಾಡಿಕೊಂಡಿದ್ದರು. ಆದರೆ ಆ ನಂತರದ ಸಾಲುಗಳಲ್ಲಿ ಕುಳಿತಿದ್ದ ಸಂಸದರು ದೈಹಿಕ ಅಂತರವನ್ನು ಗಾಳಿಗೆ ತೂರಿದ್ದು ಕಂಡುಬಂದಿತು.
PublicNext
31/01/2022 04:07 pm