ಬೆಂಗಳೂರು: ಆಡಿಯೋ ವೈರಲ್ ಬೆನ್ನಲ್ಲೇ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರನ್ನು ಪಕ್ಷದಿಂದ ಉಚ್ಛಾಟನೆಗೊಳಿಸಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.
ಆಡಿಯೋದಲ್ಲಿ ದಿವಂಗತ ಸಂಸದ, ಹಿರಿಯ ನಾಯಕ ಜಿ ಮಾದೇಗೌಡ ಅವರಿಗೆ ಎಕ್ಕಡದಲ್ಲಿ ಹೊಡೆದಿದ್ದೆ ಎಂದು ಶಿವರಾಮೇಗೌಡ ಹೇಳಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಎಲ್.ಆರ್ ಶಿವರಾಮೇಗೌಡ ಅವರು, ವೈರಲ್ ಆದ ಆಡಿಯೋ ನನ್ನದೇ ಎಂದು ಹೇಳಿದ್ದರು. ಹೀಗಾಗಿ ಶಿವರಾಮೇಗೌಡರ ವರ್ತನೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದ್ದು, ಅವರ ಮೇಲೆ ಶಿಸ್ತು ಕ್ರಮ ಜರುಗಿಸಲು ಜೆಡಿಎಸ್ ವರಿಷ್ಠರು ಚಿಂತನೆ ನಡೆಸಿದ್ದರು. ಅದರಂತೆ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ಎಲ್.ಆರ್.ಶಿವರಾಮೇಗೌಡ ಅವರನ್ನು ಜೆಡಿಎಸ್‌ನಿಂದ ಉಚ್ಛಾಟನೆಗೊಳಿಸಲಾಗಿದೆ.
PublicNext
31/01/2022 05:16 pm