ನವದೆಹಲಿ: ದೇಶದ ಯುವಜನರನ್ನು ನಿರುದ್ಯೋಗ ಸಮಸ್ಯೆ ಬಿಟ್ಟುಬಿಡದೇ ಕಾಡುತ್ತಿದೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳನ್ನು ನೀಡುವುದಾಗಿ ಬಿಜೆಪಿ ಹೇಳಿತ್ತು. ಅದರ ಪ್ರಕಾರ ನೀವು ಇದುವರೆಗೆ 15 ಕೋಟಿ ಉದ್ಯೋಗಗಳನ್ನು ಒದಗಿಸಬೇಕಿತ್ತು. ಆದರೆ ನಿಜವಾಗಿಯೂ ಎಷ್ಟು ಉದ್ಯೋಗಗಳನ್ನು ಒದಗಿಸಿದ್ದೀರಿ? ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.
ಈ ವರ್ಷದ ಬಜೆಟ್‌ನಲ್ಲಿ ಮುಂದಿನ 5 ವರ್ಷಗಳಲ್ಲಿ ಕೇವಲ 60 ಲಕ್ಷ ಉದ್ಯೋಗಗಳನ್ನು ನೀಡುತ್ತೇವೆ ಎಂದು ಹೇಳಲಾಗಿದೆ. ಆದರೆ ಈ ವಿಚಾರದಲ್ಲಿ ಕೇಂದ್ರ ಸರ್ಕಾರವು ಈ ಹಿಂದೆ ಕೊಟ್ಟ ಭರವಸೆಯನ್ನು ಈಡೇರಿಸಿಲ್ಲ. ವರ್ಷಕ್ಕೆ ಎರಡು ಕೋಟಿ ಹುದ್ದೆಗಳು ನಿಜಕ್ಕೂ ನೀಡಲಾಗಿದೆಯಾ? ಎಂಬ ಬಗ್ಗೆ ಲೆಕ್ಕ ಇಲ್ಲ. ಸದ್ಯ ದೇಶದಲ್ಲಿ ನಿರುದ್ಯೋಗದ ಬಿಕ್ಕಟ್ಟು ಶುರುವಾಗಿದೆ ಎಂದು ಅವರು ಬುಧವಾರ ರಾಜ್ಯಸಭೆಯಲ್ಲಿ ಹೇಳಿದ್ದಾರೆ.
PublicNext
02/02/2022 05:13 pm