ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯನಗರ ಜಿಲ್ಲೆ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಸಚಿವೆ ಶಶಿಕಲಾ ಜೊಲ್ಲೆ

ಹೊಸಪೇಟೆ: ರಾಜ್ಯದ ನೂತನ ಜಿಲ್ಲೆ ವಿಜಯನಗರದ ಸಮಗ್ರ ಅಭಿವೃದ್ದಿಗೆ ಅಗತ್ಯವಿರುವ ತುರ್ತು ಕೆಲಸಗಳ ಕಡೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ಹಿನ್ನೆಲೆಯಲ್ಲಿ ಫೆಬ್ರವರಿ 4 ರಂದು ಮುಖ್ಯಮಂತ್ರಿಗಳ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಗುವುದು ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಉಸ್ತುವಾರಿಯಾಗಿ ನೇಮಕವಾದ ನಂತರ ಮೊದಲ ಬಾರಿಗೆ ವಿಜಯನಗರಕ್ಕೆ ಭೇಟಿ ನೀಡಿದ ಅವರು, ಹೊಸಪೇಟೆಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ ಬಾರಿಗೆ ವಿಜಯನಗರ ಜಿಲ್ಲೆಗೆ ಆಗಮಿಸಿದ ಸಂಧರ್ಭದಲ್ಲಿ ನನಗೆ ಒಳ್ಳೆಯ ಸ್ವಾಗತ ದೊರಕಿದೆ. ಅನಾರೋಗ್ಯದ ಕಾರಣ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಿರಲಿಲ್ಲ. ಇಂದು ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲೆಯ ಎಲ್ಲಾ ವಿಷಯಗಳ ಬಗ್ಗೆ ವಿಸ್ತೃತವಾದ ಚರ್ಚೆಯನ್ನು ನಡೆಸಿದ್ದೇನೆ ಎಂದು ಜೊಲ್ಲೆ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

02/02/2022 07:13 pm

Cinque Terre

39.91 K

Cinque Terre

1

ಸಂಬಂಧಿತ ಸುದ್ದಿ