ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ರಾಜಕೀಯ ಯುಗಾಂತ್ಯವಾಗಿದೆ. ಹೀಗಾಗಿ ಪರ್ಯಾಯ ನಾಯಕತ್ವ ಬೇಕಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಬುಧವಾರ ಮಾತನಾಡಿದ ಅವರು, ಸಿಎಂ ಬದಲಾಗುತ್ತಾರೆ ಅಥವಾ ಆಗಬೇಕು ಎಂದು ನಾನು ಹೇಳಿಲ್ಲ. ಯಡಿಯೂರಪ್ಪ ಅವರ ಹವಾ ಮುಗಿದಿದೆ. ಇನ್ನೂ 3-4 ಜನರಿದ್ದಾರೆ ಅವರದ್ದೂ ಮುಗಿಯಲು ಬಂದಿದೆ. ಅವರ ನಂತರ ಪರ್ಯಾಯ ನಾಯಕತ್ವ ಬೇಕಿದೆ. ವಾಜಪೇಯಿ ನಂತರ ಮೋದಿ ಬಂದ ರೀತಿ ರಾಜ್ಯದಲ್ಲಿ ಬದಲಾವಣೆ ಅಗತ್ಯವಾಗಿದೆ. ಇದಕ್ಕಾಗಿ ಪಕ್ಷದ ವರಿಷ್ಠರು ಹೊಸ ಪ್ರಕ್ರಿಯೆ ಮಾಡುತ್ತಿದ್ದಾರೆ. ಪಕ್ಷದ ವರಿಷ್ಠರು 2023ರ ಚುನಾವಣೆಗೆ ಒಳ್ಳೆ ಟೀಮ್ ರಚಿಸಿ ಮತ್ತೆ ಅಧಿಕಾರಕ್ಕೆ ಬರುವ ಪ್ಲ್ಯಾನ್ ಇಟ್ಟಿಕೊಂಡು ಬದಲಾವಣೆ ಮಾಡಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ನಾನು ಯಾವ ಸ್ಥಾನಮಾನ ನಿರೀಕ್ಷೆ ಮಾಡಿಲ್ಲ. ಮುಂದಿನ ಚುನಾವಣೆಯಲ್ಲಿ ಪಕ್ಷ ನನಗೆ ಮಹತ್ವಪೂರ್ಣ ಜವಾಬ್ದಾರಿ ಕೊಡುತ್ತದೆ. ಸಂಕ್ರಾಂತಿ ಹಬ್ಬದ ನಂತರ ಬದಲಾವಣೆಯಾಗುತ್ತದೆ ಎಂಬ ನಿರೀಕ್ಷೆಯಿತ್ತು, ಆದರೆ ಆಗಲಿಲ್ಲ, ಆದರೆ ಯುಗಾದಿ ವೇಳೆಗೆ ರಾಜ್ಯದಲ್ಲಿ ಮಹತ್ವದ ಬದಲಾವಣೆ ನಡೆಯಲಿದೆ ಎಂದು ಹೇಳಿದ್ದಾರೆ.
PublicNext
03/02/2022 02:39 pm