ಲಖನೌ (ಉತ್ತರ ಪ್ರದೇಶ): ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಪ್ರತಿಭಟನೆ ನಡೆಸಿದ್ದ ಯುವತಿ ಪೂಜಾ ಶುಕ್ಲಾ ಅವರಿಗೆ ಸಮಾಜವಾದಿ ಪಕ್ಷ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಿದೆ.
ಲಖನೌ ಉತ್ತರ ವಿಧಾನ ಸಭಾ ಕ್ಷೇತ್ರದಿಂದ 25 ವರ್ಷ ವಯಸ್ಸಿನ ಪೂಜಾ ಕಣಕ್ಕಿಳಿದಿದ್ದಾರೆ. ಈ ಮೂಲಕ ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆಯ ಅತ್ಯಂತ ಕಿರಿಯ ವಯಸ್ಸಿನ ಅಭ್ಯರ್ಥಿ ಎನಿಸಿಕೊಂಡಿದ್ದಾರೆ.
2017ರಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರದ ನೀತಿಗಳನ್ನು ಖಂಡಿಸಿ ಸಿಎಂ ವಾಹನ ಹಾಗೂ ಬೆಂಗಾವಲು ವಾಹನಗಳನ್ನು ತಡೆಯಲು ಯತ್ನಿಸಿ ಕಪ್ಪು ಬಾವುಟ ಪ್ರದರ್ಶಿಸಿದ್ದರು. ಇದಾದ ನಂತರ ಪೂಜಾ ಶುಕ್ಲಾ ಅವರನ್ನು ಜೈಲಿಗೆ ಕಳುಹಿಸಲಾಗಿತ್ತು.
PublicNext
03/02/2022 06:49 pm