ಲಕ್ನೋ: ನೋಟು ರದ್ಧತಿ, ಲೌಕ್‌ಡೌನ್ ಸಮಯದಲ್ಲಿ ಜನರಿಗೆ ಪರಿಹಾರ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ. ದೊಡ್ಡ, ಕಾರ್ಪೊರೇಟ್ ಸ್ನೇಹಿತರಿಗಾಗಿ ಬಿಜೆಪಿ ನೆರವು ನೀಡುತ್ತಿದ್ದು, ಬಡವರು ಮತ್ತು ಸಣ್ಣ ವ್ಯಾಪಾರಿಗಳ ಬಗ್ಗೆ ಚಿಂತೆ ಮಾಡುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.
ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಭರ್ಜರಿ ಪ್ರಚಾರ ನಡೆಸಿರುವ ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. "ನಾವು ಎಲ್ಲೇ ಪ್ರಚಾರ ಮಾಡಿದರೂ ಜನರು ಅತ್ಯುತ್ಸಾಹದಿಂದ ಭಾಗವಹಿಸುತ್ತಾರೆ. ಈ ಸಂಭ್ರಮ ಉತ್ತರ ಪ್ರದೇಶದಲ್ಲಿ ರಾಜಕೀಯ ಬದಲಾವಣೆಯ ಅಲೆಯಾಗಿ ಬದಲಾಗಲಿದೆ ಎಂಬ ಭರವಸೆ ನನಗಿದೆ" ಎಂದು ಹೇಳಿದರು.
PublicNext
04/02/2022 10:30 pm