ಲಕ್ನೋ: ಉತ್ತರ ಪ್ರದೇಶದ ಕ್ರೀಡಾ ಸಚಿವ ಉಪೇಂದ್ರ ತಿವಾರಿ ಅವರು ಶುಕ್ರವಾರ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ್ದಾರೆ.
ನಾಮನಿರ್ದೇಶನ ಪ್ರಕ್ರಿಯೆ ಮುಕ್ತಾಯಗೊಳ್ಳಲು ಮೂರು ನಿಮಿಷಗಳು ಮಾತ್ರ ಬಾಕಿ ಇರುವಾಗ ಸಚಿವ ಉಪೇಂದ್ರ ತಿವಾರಿ ಅವರು ಬಲ್ಲಿಯಾ ನಗರದ ಕಲೆಕ್ಟರೇಟ್ ಆವರಣವನ್ನು ತಲುಪಿದರು. ಹೀಗಾಗಿ ಓಡೋಡಿ ಬಂದು ಕಲೆಕ್ಟರೇಟ್ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದ್ದಾರೆ. ಸಚಿವರು ಓಡೋಡಿ ಬಂದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತಿವಾರಿ ಅವರನ್ನು ಬಿಜೆಪಿಯು ಬಲ್ಲಿಯಾ ಜಿಲ್ಲೆಯ ಫೆಫ್ನಾ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಘೋಷಿಸಿದೆ.
PublicNext
05/02/2022 01:25 pm