ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ಲೋಕಸಭೆಯಲ್ಲಿ ಮೋದಿ ಭಾಷಣ: ರಾಹುಲ್‌ ಗಾಂಧಿ ಮಾತಿಗೆ ಉತ್ತರ ನೀಡುವ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಸೋಮವಾರ ಸಂಜೆ ಲೋಕಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಕಳೆದ ವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಷಣಕ್ಕೆ ಉತ್ತರ ಕೊಡುವುದರೊಂದಿಗೆ ರಾಷ್ಟ್ರಪತಿಗಳ ವಂದನಾ ನಿರ್ಣಯಕ್ಕೆ ಉತ್ತರ ನೀಡಲಿದ್ದಾರೆ. ರಾಷ್ಟ್ರಪತಿಗಳ ವಂದನಾ ನಿರ್ಣಯದ ಮೇಲೆ ವೀರಾವೇಶದಿಂದ ಮಾತನಾಡಿದ್ದ ರಾಹುಲ್‌ ಗಾಂಧಿ, ‘ಕೇಂದ್ರ ಸರ್ಕಾರ ರಾಜ್ಯಗಳ ಒಕ್ಕೂಟ ಧ್ವನಿಯನ್ನು ಹತ್ತಿಕ್ಕುತ್ತಿದೆ. ದೇಶದಲ್ಲಿ ಬಿಜೆಪಿ ಆಳ್ವಿಕೆಯಲ್ಲಿ ರಾಜನ ಪರಿಕಲ್ಪನೆ ಮರುಕಳಿಸುತ್ತಿದೆ’ ಎಂದು ಆರೋಪಿಸಿದ್ದರು.

ಬಜೆಟ್‌ ಅಧಿವೇಶನ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಸಂಸತ್ತಿನ ಜಂಟಿ ಸದನವನ್ನು ಉದ್ದೇಶಿಸಿ ಕಳೆದ ಜ.31ರಂದು ಭಾಷಣ ಮಾಡಿದ್ದರು. ರಾಷ್ಟ್ರಪತಿ ವಂದನಾ ನಿರ್ಣಯ ಚರ್ಚೆಯಲ್ಲಿ ರಾಹುಲ್ ಸೃಷ್ಟಿಸಿದ ವಿವಾದಕ್ಕೂ ಮೋದಿ ತಿರುಗೇಟು ನೀಡುವ ಸಾಧ್ಯತೆ ಇದೆ.

Edited By : Nagaraj Tulugeri
PublicNext

PublicNext

07/02/2022 07:50 am

Cinque Terre

31.07 K

Cinque Terre

1