ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂದು ದೆಹಲಿಗೆ ತೆರಳಿದ್ದಾರೆ. ಸಂಸದರು, ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರೊಂದಿಗೆ ಬೊಮ್ಮಾಯಿ ಸಭೆ ನಡೆಸಲಿದ್ದಾರೆ.
ಆರ್‌ಟಿ ನಗರದ ನಿವಾಸದಿಂದ ಕೆಐಎಬಿಗೆ ತೆರಳಿದ ಸಿಎಂ, ಅಲ್ಲಿಂದ ದೆಹಲಿಯತ್ತ ನಿರ್ಗಮಿಸಿದ್ದಾರೆ. ದೆಹಲಿಯಲ್ಲಿ ಸಂಸದರು, ರಾಜ್ಯಸಭಾ ಸದಸ್ಯರೊಂದಿಗೆ ಸಭೆ ಕರೆದಿರುವ ಕಾರಣ, ಇಂದು ಮಹತ್ವದ ಸಭೆ ನಡೆಸಲಿದ್ದಾರೆ. ನಿಗಮ ಮಂಡಳಿಗಳ ಆಧ್ಯಕ್ಷ ಸ್ಥಾನ ಬದಲಾವಣೆ ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ಬಗ್ಗೆಯೂ ಹೈಕಮಾಂಡ್‌ನೊಂದಿಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ.
ಸಿಎಂ ದೆಹಲಿಗೆ ತೆರಳಿದ ಬೆನ್ನಲ್ಲೇ ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ನಿರೀಕ್ಷೆ ಮತ್ತೆ ಗರಿಗೆದರಿದೆ. ಸಚಿವ ಸ್ಥಾನ ಆಪೇಕ್ಷೆ ಇರುವವರೂ ದಿಲ್ಲಿಗೆ ಪ್ರಯಾಣ ಬೆಳೆಸಲು ಸಜ್ಜಾಗಿದ್ದಾರೆ. ಆದ್ರೇ ಬಿಜೆಪಿ ವರಿಷ್ಠರು ಪಂಚ ರಾಜ್ಯಗಳ ಚುನಾವಣೆಯ ಬ್ಯುಸಿಯಲ್ಲಿ ಇರೋ ಕಾರಣ, ತಕ್ಷಣಕ್ಕೆ ಸಂಪುಟ ವಿಸ್ತರಣೆ ಅನುಮಾನ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.
PublicNext
07/02/2022 08:12 am