ಚಂಡೀಗಢ: ಚುನಾವಣಾ ಚಾಣಾಕ್ಷ ಹಾಗೂ ರಾಜಕೀಯ ಸಲಹೆಗಾರ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಪಕ್ಷ ಸೇರಲು ಬಯಸಿದ್ದಾರೆ. ಹಾಗೂ ಇದಕ್ಕಾಗಿ ಅವರು ನನ್ನನ್ನು ಸುಮಾರು 70 ಬಾರಿ ಭೇಟಿಯಾಗಿದ್ದಾರೆ ಎಂದು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
ಪಂಜಾಬ್ ಚುನಾವಣೆ ಕಾವು ತಾರಕಕ್ಕೇರಿರುವ ಹೊತ್ತಿನಲ್ಲೇ ಸಿಧು ಈ ಮಾತು ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ. ಚುನಾವಣಾ ರಣತಂತ್ರ ಚಾಣಾಕ್ಷ ಎಂದೇ ಹೆಸರಾಗಿರುವ ಪ್ರಶಾಂತ್ ಕಿಶೋರ್ ಅವರು ಕಳೆದ ವರ್ಷ ಪಂಜಾಬ್ ಸಿಎಂ ಆಗಿದ್ದ ಅಮರೀಂದರ್ ಸಿಂಗ್ ಅವರ ಸಲಹೆಗಾರ ಹುದ್ದೆಯನ್ನು ತ್ಯಜಿಸಿದ್ದರು. ಅದಾದ ಬಳಿಕ ಅಮರೀಂದರ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ಅವರ ನಡುವೆ ಕಾಂಗ್ರೆಸ್‌ನಲ್ಲಿ ಮನಸ್ತಾಪ ಉಂಟಾಯಿತು. ಕಾಂಗ್ರೆಸ್ ಒಳಜಗಳದಿಂದಾಗಿ ಅಮರೀಂದರ್ ಸಿಂಗ್ ಮುಖ್ಯಮಂತ್ರಿ ಸ್ಥಾನವನ್ನು ತೊರೆಯಬೇಕಾಯಿತು.
PublicNext
08/02/2022 09:59 pm