ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಜಾಬ್ ವಿವಾದ ತಮಿಳಿಗೆ ಬೇಡ ಕಮಲ್ ಹಾಸನ್ ಟ್ವೀಟ್

ಚೆನ್ನೈ: ರಾಜ್ಯದಲ್ಲಿ ಆರಂಭವಾದ ಹಿಜಾಬ್ ವಿವಾದ ಇಂದು ನೆರೆಯ ರಾಜ್ಯ ದೇಶಗಳಲ್ಲಿಯೂ ಚರ್ಚೆಗೆ ಬಂದಿದೆ. ಇದರ ಬೆನ್ನಲ್ಲೇ ನಟ, ನಟಿಯರು ಗಣ್ಯರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ನಿಲುವನ್ನು ವ್ಯಕ್ತಪಡಿಸುತ್ತಿದ್ದಾರೆ.

ಈ ವಿಚಾರವಾಗಿ ನಟ ಹಾಗೂ ಮಕ್ಕಳ ನಿಧಿ ಮಯಂ (ಎಂಎನ್ಎಂ) ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಕರ್ನಾಟಕದಲ್ಲಿ ಹಿಜಬ್ ವಿವಾದ ಅಶಾಂತಿ ಹುಟ್ಟುಹಾಕುತ್ತಿದೆ. ವಿದ್ಯಾರ್ಥಿಗಳ ಮಧ್ಯೆ ಧಾರ್ಮಿಕ ವಿಷದ ಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಕರ್ನಾಟಕದ ವಿವಾದ ತಮಿಳುನಾಡಿಗೆ ಬರುವುದು ಬೇಡ. ಪ್ರಗತಿಪರ ಶಕ್ತಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.

Edited By : Nirmala Aralikatti
PublicNext

PublicNext

09/02/2022 04:41 pm

Cinque Terre

26.6 K

Cinque Terre

1

ಸಂಬಂಧಿತ ಸುದ್ದಿ