ಬೆಂಗಳೂರು: ವಿದ್ಯಾರ್ಥಿನಿಯರು ಮೈತುಂಬ ಬಟ್ಟೆ ಹಾಕಿಕೊಳ್ಳಬೇಕು. ಯಾಕೆಂದರೆ ಮಹಿಳೆಯರು ಧರಿಸುವ ಉಡುಪುಗಳನ್ನು ನೋಡಿ ಪುರುಷರು ಉದ್ರೇಕಗೊಳ್ಳುತ್ತಾರೆ. ಅದರಿಂದ ಅತ್ಯಾಚಾರ ಪ್ರಕರಣಗಳೂ ಹೆಚ್ಚಲು ಕಾರಣ ಎಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಈ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ ಕ್ಷಮೆ ಕೇಳಿದ್ದಾರೆ.
'ಬಿಕಿನಿ ಅಥವಾ ಹಿಜಾಬ್ ಧರಿಸುವುದು ಮಹಿಳೆಯರ ಹಕ್ಕು' ಎಂಬ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಹೇಳಿಕೆಯನ್ನು ವಿರೋಧಿಸಿ ರೇಣುಕಾಚಾರ್ಯ ಅವರು ಕರ್ನಾಟಕ ಭವನದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದರು. ಬಳಿಕ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ರೇಣುಕಾಚಾರ್ಯ ಅವರು, 'ಅತ್ಯಾಚಾರ ಪ್ರಕರಣಗಳು ಹೆಚ್ಚಲು ಮಹಿಳೆಯರ ಉಡುಪೇ ಕಾರಣ ಎಂಬ ಹೇಳಿಕೆ ನೀಡಿರುವುದು ದುರುದ್ದೇಶದಿಂದ ಅಲ್ಲ. ಈ ಹೇಳಿಕೆಯಿಂದ ಮಹಿಳೆಯರಿಗೆ ನೋವಾಗಿದ್ದಲ್ಲಿ ಕ್ಷಮೆ ಕೋರುವೆ' ಎಂದು ಹೇಳಿದ್ದಾರೆ.
PublicNext
09/02/2022 04:43 pm