ನವದೆಹಲಿ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಮತ್ತೊಮ್ಮೆ ಹೋರಾಟದ ಮುನ್ನೆಲೆಗೆ ಬಂದಿದ್ದಾರೆ. ಸೂಪರ್ ಮಾರ್ಕೆಟ್ ಮತ್ತು ವಾಕ್-ಇನ್ ಸ್ಟೋರ್‌ಗಳಲ್ಲಿ ಮದ್ಯ ಮಾರಾಟ ಮಾಡಬಹುದು ಎಂಬ ಮಹಾರಾಷ್ಟ್ರ ಸರ್ಕಾರದ ಆದೇಶವನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಅವರು ಫೆ.14 ರಿಂದ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.
ಜನವರಿ 27 ರಂದು, ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿನ ಸೂಪರ್ ಮಾರ್ಕೆಟ್‍ಗಳಲ್ಲಿ ಮತ್ತು ವಾಕ್-ಇನ್ ಅಂಗಡಿಗಳಲ್ಲಿ ವೈನ್ ಮಾರಾಟ ಮಾಡಲು ಅನುಮತಿ ನೀಡಲಾಗಿತ್ತು. ಈ ಹಿನ್ನೆಲೆ ಶನಿವಾರ ಅಣ್ಣಾ ಹಜಾರೆ ಅವರು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಜ್ಞಾಪನೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಇತ್ತೀಚೆಗೆ ಮದ್ಯ ವಿಚಾರದಲ್ಲಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ವಿರೋಧಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ತಿಳಿಸಿದ್ದಾರೆ.
PublicNext
09/02/2022 07:21 pm