ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮನೆಗೆ ಸದ್ಗುರು ಜಗ್ಗಿ ವಾಸುದೇವ್ ಭೇಟಿ ನೀಡಿ ಮೊಮ್ಮಗಳನ್ನು ಕಳೆದುಕೊಂಡು ದುಃಖದಲ್ಲಿರುವ ಬಿಎಸ್ ವೈ ಗೆ ಸಮಾಧಾನ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, ಈಶ ಪ್ರತಿಷ್ಠಾನದ ಸದ್ಗುರು ನಮ್ಮ ಮನೆಗೆ ಆಗಮಿಸಿ ಆಶೀರ್ವದಿಸಿದರು. ಇದಕ್ಕಾಗಿ ಅವರಿಗೆ ಭಕ್ತಿಪೂರ್ವಕ ವಂದನೆಗಳು. ಅಕಾಲಿಕವಾಗಿ ನಮ್ಮನ್ನು ಅಗಲಿದ ಮೊಮ್ಮಗಳನ್ನು ಕಳೆದುಕೊಂಡು ದುಃಖದಲ್ಲಿರುವ ಕುಟುಂಬದ ಸದಸ್ಯರನ್ನು ಸದ್ಗುರುಗಳು ಸಾಂತ್ವನದ ಮಾತುಗಳಿಂದ ಸಂತೈಸಿದ್ದು, ಮನಸ್ಸಿಗೆ ಅತ್ಯಂತ ಸಮಾಧಾನ ಉಂಟುಮಾಡಿದೆ ಎಂದಿದ್ದಾರೆ.
ಬಿ. ಎಸ್ ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಜ.28 ರಂದು ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸೌಂದರ್ಯ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. 2018ರಲ್ಲಿ ಜಿಲ್ಲಾ ಪಂಚಾಯತ ಸದಸ್ಯರಾದ ಮರಿಸ್ವಾಮಿ ಅಣ್ಣನ ಮಗ ಡಾ. ನಿರಂಜನ್ ಅವರನ್ನು ಮದುವೆಯಾಗಿದ್ದರು. ಮೃತ ಸೌಂದರ್ಯಗೆ ಒಂದು ಮಗು ಇದೆ.
PublicNext
13/02/2022 02:05 pm