ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿ ಎಂದರೆ ಸುಳ್ಳುಗಾರರ ಪಕ್ಷ: ಅಖಿಲೇಶ್ ಯಾದವ್

ಲಕ್ನೋ: ಭಾರತೀಯ ಜನತಾ ಪಕ್ಷ ಸುಳ್ಳುಗಾರರ ಪಕ್ಷ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ.

ಉತ್ತರ ಪ್ರದೇಶದ ಎರಡನೇ ಹಂತದ ವಿಧಾನಸಭಾ ಚುನಾವಣೆಯ ಮುನ್ನ ಬದೌನ್‍ನಲ್ಲಿ ರ್‍ಯಾಲಿ ನಡೆಸಿ ಮಾತನಾಡಿದ ಅವರು, ಬಿಜೆಪಿಯ ಸಣ್ಣ ನಾಯಕರು ಸಣ್ಣ ಸುಳ್ಳುಗಳನ್ನು ಹೇಳುತ್ತಿದ್ದಾರೆ. ದೊಡ್ಡ ನಾಯಕರು ದೊಡ್ಡ ಸುಳ್ಳುಗಳನ್ನು ಹೇಳುತ್ತಿದ್ದಾರೆ ಮತ್ತು ಉನ್ನತ ನಾಯಕರು ದೊಡ್ಡ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಒಟ್ಟಾರೆ ಬಿಜೆಪಿ ಸುಳ್ಳುಗಾರರ ಪಕ್ಷ ಎಂದು ವಾಗ್ದಾಳಿ ನಡೆಸಿದ್ದಾರೆ.

ಫೆಬ್ರವರಿ 10 ರಿಂದ ರಾಜ್ಯದಲ್ಲಿ ಏಳು ಹಂತದ ವಿಧಾನಸಭಾ ಚುನಾವಣೆ ಆರಂಭವಾಗಿದ್ದು, ಮೊದಲ ಹಂತದ ಮತದಾನದ ಶೇಕಡಾವಾರು ಪ್ರಮಾಣದಲ್ಲಿ ಬಿಜೆಪಿ ವಿರುದ್ಧ ಸಮಾಜವಾದಿ ಪಕ್ಷ ಅತೀ ಹೆಚ್ಚು ಮತಗಳನ್ನು ಪಡೆಯುವ ಮೂಲಕ ರಾಜಕೀಯ ದಿಕ್ಕನ್ನೇ ಬದಲಿಸಿದೆ ಎಂದಿದ್ದಾರೆ.

Edited By : Nagaraj Tulugeri
PublicNext

PublicNext

13/02/2022 05:37 pm

Cinque Terre

52.92 K

Cinque Terre

4

ಸಂಬಂಧಿತ ಸುದ್ದಿ