ಲಖನೌ (ಉತ್ತರ ಪ್ರದೇಶ): ಕಾಂಗ್ರೆಸ್ ಪಕ್ಷವನ್ನು ಹಾಳು ಮಾಡಲು ಅಕ್ಕ-ತಮ್ಮ (ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ) ಇದ್ದರೆ ಸಾಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಎಎನ್‌ಐ ಸುದ್ದಿ ಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ನಾಶ ಮಾಡಲು ಹೊರಗಿನವರು ಬೇಡವೇ ಬೇಡ. ಒಡಹುಟ್ಟಿದವರೇ ಕಾಂಗ್ರೆಸ್ ಪಕ್ಷವನ್ನು ನಾಶ ಮಾಡುತ್ತಾರೆ. ಈ ಬಗ್ಗೆ ತಲೆ ಕೆಡಿಸಿಕೊಳ್ಳುವುದೇ ಬೇಡ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
PublicNext
14/02/2022 04:48 pm