ಬೀದರ್: ಸಚಿವ ಕೆ.ಎಸ್ ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಲೇಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮುಂದೊಂದು ದಿನ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಾಡಲಿದೆ ಎಂದು ಸಚಿವ ಈಶ್ವರಪ್ಪ ಇತ್ತೀಚೆಗೆ ಹೇಳಿದ್ದರು. ಈ ಹೇಳಿಕೆ ವಿರುದ್ಧ ಬೀದರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಈಶ್ವರ್ ಖಂಡ್ರೆ, ಜವಾಬ್ದಾರಿ ಸ್ಥಾನದಲ್ಲಿರುವ ಸಚಿವ ಸಂಪುಟದ ಹಿರಿಯ ಸದಸ್ಯರು, ನಮ್ಮ ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವ ಹೇಳಿಕೆ ನೀಡಿರುವುದು ಖಂಡನೀಯ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
PublicNext
16/02/2022 08:11 am