ಬೆಂಗಳೂರು: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಈಶ್ವರಪ್ಪ ನೀಡಿದ ಕೇಸರಿ ಧ್ವಜದ ಹೇಳಿಕೆ ಕೋಲಾಹಲವನ್ನು ಸೃಷ್ಟಿಸಿದೆ.ಇದರಿಂದ ಸಭೆಯಲ್ಲಿ ಬಿಜೆಪಿ ಕಾಂಗ್ರೆಸ್ ಶಾಸಕರ ವಾಗ್ವಾದ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಕೆಂಪುಕೋಟೆ ಮೇಲೆ ಕೇಸರಿಧ್ವಜ ಹಾರಿಸುತ್ತೇವೆ ಎಂದಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಯನ್ನು ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಸ್ತಾಪಿಸಿದರು.
ಈ ವೇಳೆ ಕಾಂಗ್ರೆಸ್ ಸದಸ್ಯರು ‘ಶೇಮ್ ಶೇಮ್, ದೇಶದ್ರೋಹಿಗಳು’ ಎಂದು ಘೋಷಣೆಗಳನ್ನು ಕೂಗಿದರು. ಇಂಥ ಭಾಷಣ ಮಾಡಿದ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ, ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕಿತ್ತು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.
ಒಟ್ಟಾರೆಯಲ್ಲಿ ಸದನದಲ್ಲಿ ಕಾಂಗ್ರೆಸ್ ಗದ್ದಲದಿಂದ ಸ್ಪಿಕರ್ ಕಾಗೇರಿ ಕಲಾಪವನ್ನು ನಾಳೆಗೆ ಮುಂದೂಡಿದ್ದಾರೆ.
PublicNext
16/02/2022 04:33 pm