ಬೆಂಗಳೂರು : ವಿಧಾನಸಭೆಯಲ್ಲಿ ಇಂದು ಈಶ್ವರಪ್ಪ ಮತ್ತು ಡಿಕೆ ಶಿವಕುಮಾರ್ ಮಾತಿನ ಯುದ್ದ ಒಂದು ಕ್ಷಣ ಕೈ ಕೈ ಮಿಲಾಯಿಸುವ ಹಂತ ತಲುಪುವುದರಲ್ಲಿತ್ತು. ಕೆಲದಿನಗಳ ಹಿಂದೆ ಈಶ್ವರಪ್ಪ ರಾಷ್ಟ್ರಧ್ವಜದ ಬಗ್ಗೆ ನೀಡಿದ ಹೇಳಿಕೆ ಸದನದಲ್ಲಿ ಕೋಲಾಹಲ ಸೃಷ್ಟಿಸಿತು. ಈಶ್ವರಪ್ಪ ಮಾತಿನ ಬಗ್ಗೆ ಸಿದ್ದರಾಮಯ್ಯ ಧ್ವನಿ ಎತ್ತುತ್ತಿದ್ದಂತೆ, ಡಿ.ಕೆ ಶಿವಕುಮಾರ್, ಈಶ್ವರಪ್ಪ ವಿರುದ್ಧ ವಾಕ್ಸಮರ ನಡೆಸಿದರು.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈಶ್ವರಪ್ಪ ಹೇಳಿಕೆಯ ಬಗ್ಗೆ ಅವರ ಅಭಿಪ್ರಾಯ ಕೇಳುತ್ತೇನೆ ಎಂದಾಗ, ದೇಶದ್ರೋಹ ಮಾಡಿವರೊಂದಿಗೆ ಏನು ಉತ್ತರ ಕೇಳುತ್ತೀರಿ ಎಂದು ಡಿಕೆಶಿ ಪ್ರಶ್ನಿಸಿದರು. ಶಿವಕುಮಾರ್ ಮಾತಿಗೆ ತೀವ್ರ ಸಿಟ್ಟಿಗೆದ್ದ ಈಶ್ವರಪ್ಪ ರಾಷ್ಟ್ರ ದ್ರೋಹಿ ಅವನು, ಜೈಲಿಗೆ ಹೋಗಿ ಬಂದವನು ನನಗೇನು ಹೇಳೋದು, ಬೇಲ್ ನಲ್ಲಿ ಇದ್ದೀಯಾ, ನೀನು ರಾಷ್ಟ್ರ ದ್ರೋಹಿ ನೀನು ನನಗೆ ಹೇಳಬೇಡ ಎಂದು ಡಿಕೆಶಿ ವಿರುದ್ಧ ಕಿಡಿಕಾರಿದರು.
ಸದನದಲ್ಲಿ ಕೆಲಕಾಲ ಏಕವಚನದಲ್ಲಿ ಇಬ್ಬರೂ ಕೈ, ಕೈ ತೋರಿಸಿಕೊಂಡು ಕೂಗಾಡಿದರು. ಡಿಕೆಶಿ ಮತ್ತು ಈಶ್ವರಪ್ಪ ಕೂಗಾಡುತ್ತಿದ್ದಂತೆ ಮಧ್ಯಪ್ರವೇಶಿಸಿದ ಸ್ಪೀಕರ್, ನೀವೆಲ್ಲ ಹಿರಿಯ ಸದಸ್ಯರು, ಏಕೆ ಹೀಗೆ ಆಡ್ತೀರಿ?. ಎಂದು ಗರಂ ಆದರು. ಕಾಂಗ್ರೆಸ್ ಸದಸ್ಯರು ರಾಷ್ಟ್ರ ಧ್ವಜ ಹಿಡಿದು ಪ್ರತಿಭಟನೆ ನಡೆಸಿದರು.
PublicNext
16/02/2022 06:07 pm