ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಪ್ ಪಂಜಾಬ್ ನಾಶ ಮಾಡುತ್ತೆ : ರಾಗಾ ಆರೋಪ

ಚಂಡಿಗಢ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ಭಯೋತ್ಪಾಕದರ ಬಗ್ಗೆ ಮೃದು ಧೋರಣೆ ಹೊಂದಿದ್ದು, ಉಗ್ರನ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು ಹಾಗಾಗಿ ಅವರು ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ವಿಶ್ವಾಸಾರ್ಹವಾದ ವ್ಯಕ್ತಿಯಲ್ಲ ಎಂದು ರಾಗಾ ದೂರಿದ್ದಾರೆ.

ಪಂಜಾಬ್ ನ ಬರ್ನಾಲಾದಲ್ಲಿ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಮುಖಂಡರು ಯಾವತ್ತೂ ಉಗ್ರರ ಮನೆಯಲ್ಲಿ ಕಾಣಿಸಿಕೊಂಡಿಲ್ಲ. ಆದರೆ 2017ರ ಚುನಾವಣೆಯ ಸಂದರ್ಭದಲ್ಲಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ನ ಮೋಗಾದಲ್ಲಿ ಮಾಜಿ ಖಲಿಸ್ತಾನಿ ಉಗ್ರನ ಮನೆಯಲ್ಲಿ ವಾಸ್ತವ್ಯ ಹೂಡಿರುವುದಾಗಿ ವರದಿ ಹೇಳಿದೆ.

ಸರಕಾರ ರಚಿಸಲು ನಮಗೊಂದು ಅವಕಾಶ ಕೊಡಿ ಎಂದು ಕೇಳುತ್ತಿರುವವರು (ಆಪ್) ಪಂಜಾಬ್ ಅನ್ನು ನಾಶ ಮಾಡುತ್ತಾರೆ ಮತ್ತು ರಾಜ್ಯ ಹೊತ್ತಿ ಉರಿಯಬಹುದು ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷ ಮಾತ್ರ ಪಂಜಾಬ್ ಜನರ ನಾಡಿ ಮಿಡಿತ ಅರಿತಿದೆ ಎಂದು ರಾಹುಲ್ ಹೇಳಿದ್ದಾರೆ.

Edited By :
PublicNext

PublicNext

16/02/2022 10:17 pm

Cinque Terre

40.28 K

Cinque Terre

7

ಸಂಬಂಧಿತ ಸುದ್ದಿ