ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ. ಇದಕ್ಕೂ ಮುನ್ನ ಪ್ರತಿಭಟನೆ ಕೈ ಬಿಡುವಂತೆ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಹಲವು ಸಚಿವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಸದಸ್ಯರನ್ನು ಮನವೊಲಿಸಲು ನಡೆಸಿದ ಸಂಧಾನ ಸಭೆ ವಿಫಲಾಯಿತು.
ಕಾಂಗ್ರೆಸ್ ನಾಯಕರು ಸದನದಲ್ಲಿ ಅಹೋರಾತ್ರಿ ಧರಣಿ ಮುಂದುವರೆಸಿದಾಗ ಬೆಡ್, ತಲೆ ದಿಂಬುಗಳು ಹಾಗೂ ಹೊದಿಕೆ ವ್ಯವಸ್ಥೆ ಮಾಡಲಾಗಿತ್ತು. ಧರಣಿ ಹಿನ್ನೆಲೆಯಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಅವರು ಟ್ರಾಕ್ ಪ್ಯಾಂಟ್ ಹಾಗೂ ಟೀ ಶರ್ಟ್ ಧರಿಸಿ ಆಗಮಿಸಿದ್ದರು. ಆಹೋರಾತ್ರಿ ಧರಣಿ ಹಿನ್ನೆಲೆಯಲ್ಲಿ ಧರಣಿ ನಿರತ ಕಾಂಗ್ರೆಸ್ ನಾಯಕರು ಹಾಗೂ ಶಾಸಕರಿಗೆ ಭರ್ಜರಿ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಸ್ಪೀಕರ್ ಸೂಚನೆ ಮೇರೆಗೆ ವಿಧಾನಸಭೆ ಸಚಿವಾಲಯದಿಂದ ಊಟ ವ್ಯವಸ್ಥೆ ಮಾಡಿದ್ದರು.
PublicNext
18/02/2022 08:06 am