ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಇರಲಿದೆ. ಸದನದ ಹೊರಗೂ ನಮ್ಮ ಹೋರಾಟ ನಡೆಯಲಿದೆ. ಬಿಜೆಪಿಯವರಿಗೆ ರಾಷ್ಟ್ರ, ರಾಷ್ಟ್ರಧ್ವಜದ ಬಗ್ಗೆ ಗೌರವ ಇಲ್ಲ. ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದವರಲ್ಲ. ಆರ್‌ಎಸ್ಎಸ್ ಮೊದಲು ಸಂವಿಧಾನ ವಿರೋಧಿಸಿದ್ದರು. ಅವರಿಂದ ಮತ್ತೇನು ನಿರೀಕ್ಷಿಸಲು ಸಾಧ್ಯ ಎಂದು ಹೇಳಿದ್ದಾರೆ.
ರಾಷ್ಟ್ರಧ್ವಜ ಕುರಿತು ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಿಂದ ಅಹೋರಾತ್ರಿ ಧರಣಿ ನಡೆಸಿದ್ದಾರೆ.
PublicNext
18/02/2022 08:34 am