ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಈಶ್ವರಪ್ಪ ಹೇಳಿಲ್ಲ: ಕುಮಾರಸ್ವಾಮಿ

ಬೆಂಗಳೂರು: ದೆಹಲಿಯ ಕೆಂಪು ಕೋಟೆ ಮೇಲೆ ನಾನೇ ಸ್ವತಃ ಕೇಸರಿ ಧ್ವಜ ಹಾರಿಸೋದಾಗಿ ಸಚಿವ ಈಶ್ವರಪ್ಪ ಹೇಳಿಲ್ಲ. ಅಧಿವೇಶನ ನಡೆಸಲು ದಿನಕ್ಕೆ ಒಂದರಿಂದ ಒಂದೂವರೆ ಕೋಟಿ ಖರ್ಚಾಗುತ್ತೆ. ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕಾದ ಕಾಂಗ್ರೆಸ್ ತನ್ನ ಪ್ರತಿಷ್ಠಗಾಗಿ ಕಲಾಪವನ್ನು ಹಾಳು ಮಾಡುತ್ತಿದೆ ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್‌ ನಾಯಕ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, 'ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು ಎಂಬುದು ಬಿಜೆಪಿ, ಆರ್‌ಎಸ್‌ಎಸ್‌ ಮತ್ತು ಅದರ ಸಹ ಸಂಘಟನೆಗಳ ಕಾರ್ಯಸೂಚಿ. ಆ ಕಾರಣದಿಂದ ಮುಂದೊಂದು ದಿನ ಕೆಂಪುಕೋಟೆಯಲ್ಲಿ ಯಾರಾದರೂ ಕೇಸರಿ ಧ್ವಜ ಹಾರಿಸಬಹುದು ಎಂದು ಈಶ್ವರಪ್ಪ ಹೇಳಿದ್ದಾರೆ ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

Edited By : Nagaraj Tulugeri
PublicNext

PublicNext

18/02/2022 09:19 am

Cinque Terre

26.88 K

Cinque Terre

24

ಸಂಬಂಧಿತ ಸುದ್ದಿ