ಬೆಂಗಳೂರು: ಬಹುಕೋಟಿ ಐಎಂಎ ಹಗರಣದಲ್ಲಿ ಆರೋಪಿಗಳಾಗಿರುವ ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿ ಹಗರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನ ಪರಿಷತ್ ನ ಪ್ರಶ್ನೋತ್ತರದ ವೇಳೆ ಬಿಜೆಪಿ ಸದಸ್ಯ ಎನ್,ರವಿಕುಮಾರ್ ಅವರು ವಿಷಯ ಪ್ರಸ್ತಾಪಿಸಿದ್ದಕ್ಕೆ ಉತ್ತರಿಸಿದ ಸಿಎಂ ಎಲ್ಲರ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.
ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮೇಲೆ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. ಪ್ರಾಸಿಕ್ಯೂಷನ್ ಗೂ ಅನುಮತಿ ನೀಡಲಾಗಿದೆ. ಅದರ ವಿರುದ್ಧ ಹೇಮಂತ್ ನಿಂಬಾಳ್ಕರ್ ಕೋರ್ಟ್ ನಿಂದ ಸ್ಟೇ ತಂದಿದ್ದಾರೆ. ಸಿಬಿಐ ತನಿಖೆ ನಡೆಸುತ್ತಿದ್ದು ಸುಪ್ರಿಂ ಕೋರ್ಟ್ ಗೆ ಹೋಗಿದೆ. ಅಲ್ಲಿಂದ ತೀರ್ಪು ಬಂದ ಮೇಲೆ ಕ್ರಮ ಕೈಗೊಳ್ಳುತ್ತೇವೆ.
ಮತ್ತೊಬ್ಬ ಐಪಿಎಸ್ ಅಧಿಕಾರಿ ಅಜಯ್ ಹಿಲರಿ ವಿರುದ್ಧವೂ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಈ ಬಗ್ಗೆಯೂ ಸರ್ಕಾರ ಕ್ರಮವಹಿಸಿದೆ. ಯಾರೇ ಹಗರಣದಲ್ಲಿ ಭಾಗಿಯಾಗಿದ್ದರೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಆಗೇ ಆಗುತ್ತೆ ಅಂತ ಭರವಸೆ ನೀಡಿದರು.
PublicNext
18/02/2022 11:56 am