ದಾವಣಗೆರೆ: ಸಚಿವ ಕೆ. ಎಸ್ ಈಶ್ವರಪ್ಪ ವಿರುದ್ಧ ವಿಧಾನಸಭೆಯಲ್ಲಿ ಗೂಂಡಾಗಿರಿ ಪ್ರದರ್ಶಿಸಿದ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ವರ್ತನೆ ಖಂಡಿಸಿ ಹೊನ್ನಾಳಿ-ನ್ಯಾಮತಿ ಬಿಜೆಪಿ ಮಂಡಲ ಯುವ ಮೋರ್ಚಾದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಹೊನ್ನಾಳಿ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಯುವ ಮುಖಂಡರು, ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ವಿರುದ್ಧ ಏಕವಚನದಲ್ಲಿ ಮಾತನಾಡಿರುವ ರಾಜ್ಯ ಕಾಂಗ್ರೆಸ್ ಯುವ ಮೋರ್ಚಾ ಅಧ್ಯಕ್ಷ ಮೊಹಮದ್ ನಲಪಾಡ್ ವಿರುದ್ಧ ಹಾಗೂ ಹಿಜಾಬ್ ವಿಚಾರದಲ್ಲಿ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡುತ್ತಿರುವ ಕಾಂಗ್ರೆಸ್ ಪಕ್ಷದ ಕೆಲ ನಾಯಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಡಿ. ಕೆ.ಶಿವಕುಮಾರ್ ಹಾಗೂ ಮಹಮದ್ ನಲಪಾಡ್ ಕೂಡಲೇ ಕ್ಷಮೆ ಕೇಳಬೇಕು. ಯಡಿಯೂರಪ್ಪ ಅವರು ರಾಜಕೀಯದಲ್ಲಿ ಜೀವನವನ್ನೇ ಕಳೆದಿದ್ದಾರೆ. ಸಿಎಂ ಆಗಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಯಡಿಯೂರಪ್ಪರ ವಯಸ್ಸಿಗಾದರೂ ಬೆಲೆ ಕೊಟ್ಟು ಮಾತನಾಡಬೇಕು. ಕೂಡಲೇ ಕ್ಷಮೆಯಾಚಿಸದಿದ್ದರೆ ಪ್ರತಿಭಟನೆ ಮತ್ತಷ್ಟು ಉಗ್ರವಾಗಿ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
PublicNext
18/02/2022 02:49 pm