ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಹಿಜಾಬ್' ತಂಟೆಗೆ ಬಂದ್ರೆ ತುಂಡು ತುಂಡಾಗಿ ಕತ್ತರಿಸುತ್ತೇನೆಂದ ಕಾಂಗ್ರೆಸ್ ಮುಖಂಡನ ವಿರುದ್ಧ FIR ದಾಖಲು

ಕಲಬುರಗಿ: ಹಿಜಾಬ್ ತಂಟೆಗೆ ಬಂದರೆ ನಿಮ್ಮನ್ನು ತುಂಡು ತುಂಡಾಗಿ ಕತ್ತರಿಸುತ್ತೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ಮುಕ್ರಂ ಖಾನ್ ವಿರುದ್ಧ ಶುಕ್ರವಾರ ಎಫ್‍ಐಆರ್ ದಾಖಲಾಗಿದೆ.

ಕೆಲದಿನಗಳ ಹಿಂದೆ ಹಿಜಾಬ್ ತಂಟೆಗೆ ಬಂದರೆ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಆಂದೋಲಾ ಸ್ವಾಮಿಯನ್ನು ತುಂಡು, ತುಂಡು ಮಾಡಿ ಕತ್ತರಿಸುತ್ತೇನೆ ಎಂದು ಮುಕ್ರಂ ಖಾನ್ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಠಾಣೆಯ ಬಳಿ ಪ್ರತಿಭಟನೆ ನಡೆಸಿದ್ದ ಹಿಂದೂಪರ ಸಂಘಟನೆಗಳು, ಮುಕ್ರಂ ಖಾನ್ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದರು.

ಪ್ರತಿಭಟನೆ ಬಳಿಕ ಇದೀಗ ಕಲಬುರಗಿ ಜಿಲ್ಲೆಯ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಚೋದನಕಾರಿ ಭಾಷಣ, ಕೋಮು ಸೌಹಾರ್ದತೆ ಕದುಡುವ ನಿಟ್ಟಿನಲ್ಲಿ ಹೇಳಿಕೆ ನೀಡಿದ ಮುಕ್ರಂ ಖಾನ್ ವಿರುದ್ಧ ಐಪಿಸಿ ಸೆಕ್ಷನ್ (153), (295), (298) ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ.

Edited By : Vijay Kumar
PublicNext

PublicNext

18/02/2022 07:34 pm

Cinque Terre

41.18 K

Cinque Terre

15

ಸಂಬಂಧಿತ ಸುದ್ದಿ