ಬೆಂಗಳೂರು: ಗ್ರಾಮೀಣ ಸಚಿವ ಕೆ.ಎಸ್.ಈಶ್ವರಪ್ಪನವರನ್ನ ಬೈಕ್ Rally ಮೂಲಕ ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಯಾಕೆ ಎಫ್‌ಐಆರ್ ದಾಖಲಿಸಿಲ್ಲ ಅಂತಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶಿವಮೊಗ್ಗ ಜಿಲ್ಲಾವರಿಷ್ಠಾಧಿಕಾರಿಯನ್ನ ಪೋನ್ ಮೂಲಕವೇ ಕೇಳಿ ಬಿಟ್ಟಿದ್ದಾರೆ.
ಹೌದು! ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರಧ್ವಜದ ಬಗ್ಗೆ ಈಶ್ವರಪ್ಪ ನೀಡಿದ್ದ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದರು. ಈ ಟೈಮ್ ನಲ್ಲಿಯೇ ಸುಮಾರು 15 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಇದನ್ನ ಗಮನದಲ್ಲಿ ಇಟ್ಟುಕೊಂಡೇ ಡಿಕೆಶಿ ಶಿವಮೊಗ್ಗ ಎಸ್ಪಿ ಲಕ್ಷ್ಮೀ ಪ್ರಸಾದ್ ಅವರಿಗೆ ವಿಧಾನಸೌಧದಿಂದಲೇ ಕರೆ ಮಾಡಿದ್ದಾರೆ. ಕೇವಲ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಯಾಕೆ ಎಫ್ಐಆರ್ ಹಾಕಿದ್ದೀರಾ ? ಬಿಜೆಪಿ ಕಾರ್ಯಕರ್ತರ ವಿರುದ್ಧ ಯಾಕೆ ಎಫ್‌ಐಆರ್ ಹಾಕಿಯೇ ಇಲ್ಲ ಅಂತಲೇ ಖಡಕ್ ಆಗಿಯೇ ಡಿಕೆಶಿ ಪ್ರಶ್ನೆ ಮಾಡಿದ್ದಾರೆ.
PublicNext
19/02/2022 11:05 pm