ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಫೆ.27ರಿಂದ ಮತ್ತೆ ಮೇಕೆದಾಟು ಪಾದಯಾತ್ರೆ ಶುರು

ರಾಮನಗರ: ಮೇಕೆದಾಟು ಎರಡನೇ ಹಂತದ ಪಾದಯಾತ್ರೆಗೆ ಫೆಬ್ರವರಿ 27ರಂದು ಬೆಳಿಗ್ಗೆ 9ಕ್ಕೆ ರಾಮನಗರದಲ್ಲಿ ಚಾಲನೆ ದೊರೆಯಲಿದ್ದು, 7 ದಿನಗಳ ಬದಲಿಗೆ 5 ದಿನಕ್ಕೆ ನಡಿಗೆಯನ್ನು ಸೀಮಿತಗೊಳಿಸಲಾಗುವುದು ಎಂದು ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್‌ ಹೇಳಿದ್ದಾರೆ.

ರಾಮನಗರದ ಚನ್ನಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಎರಡನೇ ಹಂತದ ಮೇಕೆದಾಟು ಪಾದಯಾತ್ರೆ ವಿಚಾರವಾಗಿ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, 'ಪಾದಯಾತ್ರೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಪಾಲ್ಗೊಳ್ಳುತ್ತಾರೆ’ ಎಂದು ಮಾಹಿತಿ ನೀಡಿದರು.

ಮೊದಲು ಬೆಂಗಳೂರಿನಲ್ಲೇ ಐದು ದಿನ ಪಾದಯಾತ್ರೆಗೆ ನಿರ್ಧರಿಸಿದ್ದೆವು. ಆದರೆ ರಾಜ್ಯ ಬಜೆಟ್‌ ಇರುವ ಕಾರಣ ಅಲ್ಲಿ ಮೂರು ದಿನ ಮಾತ್ರ ನೀರಿಗಾಗಿ ನಡಿಗೆ ನಡೆಯಲಿದೆ. ಮೊದಲ ದಿನ ರಾಮನಗರದಿಂದ ಬಿಡದಿ ಹಾಗೂ ಎರಡನೇ ದಿನ ಬಿಡದಿಯಿಂದ ಕೆಂಗೇರಿವರೆಗೆ ನಿಗದಿಯಂತೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

Edited By : Vijay Kumar
PublicNext

PublicNext

21/02/2022 07:45 am

Cinque Terre

44.45 K

Cinque Terre

0

ಸಂಬಂಧಿತ ಸುದ್ದಿ