ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ವೇದಿಕೆ ಮೇಲೆಯೇ ಬಿಜೆಪಿ ಕಾರ್ಯಕರ್ತನ ಪಾದ ಮುಟ್ಟಿ ನಮಸ್ಕರಿಸಿದ್ದಾರೆ. ಈ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪ್ರಧಾನಿ ಮೋದಿ ಅವರು ಭಾನುವಾರ ಉತ್ತರ ಪ್ರದೇಶದ ಉನ್ನಾವೊದಲ್ಲಿ ನಡೆದಿದ್ದ ಚುನಾವಣಾ ಸಮಾವೇಶಕ್ಕೆ ಆಗಮಿಸಿದ್ದರು. ಈ ವೇಳೆ ಉನ್ನಾವೊ ಬಿಜೆಪಿ ಜಿಲ್ಲಾಧ್ಯಕ್ಷ ಅವಧೇಶ್ ಕಟಿಯಾರ್ ಅವರು ಪ್ರಧಾನಿ ಮೋದಿಗೆ ಶ್ರೀರಾಮನ ವಿಗ್ರಹವನ್ನು ನೀಡಿದರು. ಬಳಿಕ ಅವಧೇಶ್ ಕಟಿಯಾರ್ ಮೊದಲು ಪ್ರಧಾನಿ ಮೋದಿಯವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದರು. ತಕ್ಷಣವೇ ಪ್ರಧಾನಿ ಮೋದಿ ಅವರು ಈ ರೀತಿ ಮಾಡಬೇಡಿ ಎಂದು ಅವಧೇಶ್ ಕಟಿಯಾರ್ ಅವರಿಗೆ ತಿಳಿಸಿದ್ದಲ್ಲದೆ ಅವಧೇಶ್ ಅವರ ಪಾದ ಮುಟ್ಟಿ ನಮಸ್ಕರಿಸಿದರು.
ಈ ವಿಡಿಯೋವನ್ನು ಬಿಜೆಪಿ ಮುಖಂಡ ಅರುಣ್ ಯಾದವ್ ಟ್ವೀಟ್ ಮಾಡಿದ್ದಾರೆ. ಜೊತೆಗೆ 'ಪ್ರಧಾನಿ ಮೋದಿಜಿ ಮಾತ್ರ ಕಾರ್ಯಕರ್ತರ ಪಾದ ಮುಟ್ಟಲು ಸಾಧ್ಯ' ಎಂದು ಬರೆದುಕೊಂಡಿದ್ದಾರೆ.
PublicNext
21/02/2022 01:57 pm