ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹರ್ಷನ ಕುಟುಂಬಕ್ಕೆ 1 ಲಕ್ಷ ಪರಿಹಾರ : ಅರವಿಂದ ಲಿಂಬಾವಳಿ

ಬೆಂಗಳೂರು : ಶಿವಮೊಗ್ಗ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ದುಷ್ಕರ್ಮಿಗಳನ್ನು ಬಂಧಿಸುವಂತೆ ಶಾಸಕ ಅರವಿಂದ ಲಿಂಬಾವಳಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇದೇ ವೈಯುಕ್ತಿಕವಾಗಿ ಹರ್ಷನ ಕುಟುಂಬಕ್ಕೆ 1 ಲಕ್ಷ ಪರಿಹಾರ ಧನ ಘೋಷಿಸಿದ ಶಾಸಕರು, ಈ ಘಟನೆಯಿಂದ ಅವರ ಕುಟುಂಬಕ್ಕೆ ಉಂಟಾಗಿರುವ ನೋವು ಮತ್ತು ನಷ್ಟವನ್ನು ಭರಿಸಲು ಯಾರಿಂದಲೂ ಸಾಧ್ಯವಿಲ್ಲ .

ಇಂತಹ ಕಷ್ಟದ ಸಮಯದಲ್ಲಿ ಅವರ ಕುಟುಂಬದ ಜೊತೆಗೆ ಕೈಜೋಡಿಸಬೇಕಾಗಿರುವುದು ನಮ್ಮ ಜವಾಬ್ದಾರಿ ಮಗನನ್ನು ಕಳೆದುಕೊಂಡ ಕುಟುಂಬದ ಜೊತೆ ನಿಲ್ಲುವುದಾಗಿ ಶಾಸಕ ಲಿಂಬಾವಳಿ ಹೇಳಿದರು.ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಶಾಸಕ ಅರವಿಂದ ಲಿಂಬಾವಳಿ ಹತ್ಯೆ ಪ್ರಕರಣವನ್ನು ಖಂಡಿಸಿದ್ದಾರೆ.

Edited By : Nirmala Aralikatti
PublicNext

PublicNext

21/02/2022 07:07 pm

Cinque Terre

41.13 K

Cinque Terre

9