ಪಾಟ್ನಾ: ಮೇವು ಹಗರಣಕ್ಕೆ ಸಂಬಂಧಿಸಿದ ಡೊರಂಡ ಖಜಾನೆ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್‌ಗೆ ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ, 60 ಲಕ್ಷ ರೂ. ದಂಡ ವಿಧಿಸಿದೆ. ಈ ಸಂಬಂಧ ಲಾಲು ಪುತ್ರ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
'ಒಂದು ವೇಳೆ ಲಾಲು ಅವರು ಬಿಜೆಪಿ ಜತೆ ಕೈಜೋಡಿಸಿದ್ದರೆ ಅವರನ್ನು ರಾಜ ಹರಿಶ್ಚಂದ್ರ ಎಂದು ಕರೆಯಲಾಗುತ್ತಿತ್ತು. ಆದರೆ ಲಾಲು ಪ್ರಸಾದ್ ಅವರು ಆರ್‌ಎಸ್‌ಎಸ್-ಬಿಜೆಪಿ ವಿರುದ್ಧ ಹೋರಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಜೈಲು ಶಿಕ್ಷೆಯಾಗಿದೆ. ಇದಕ್ಕೆಲ್ಲ ನಾವು ಹೆದರುವುದಿಲ್ಲ' ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.
PublicNext
22/02/2022 08:49 am