ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ 59 ಕ್ಷೇತ್ರಗಳಿಗೆ 4ನೇ ಹಂತದ ಮತದಾನ ಬುಧವಾರ (ಇಂದು) ಆರಂಭವಾಗಿದೆ.
9 ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ (ಇಂದು) 4ನೇ ಹಂತದ ಮತದಾನ ಆರಂಭವಾಗಿದೆ. ಪಿಲಿಭಿತ್, ಲಖಿಂಪುರ ಖೇರಿ, ಸೀತಾಪುರ್, ಹರ್ದೋಯ್, ಉನ್ನಾವೋ, ಲಖನೌ, ರಾಯ್ ಬರೇಲಿ, ಬಂದಾ ಮತ್ತು ಫತೇಪುರ್ ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಲ್ಲಿ 624 ಅಭ್ಯರ್ಥಿಗಳ ಭವಿಷ್ಯ ನಿರ್ಧರವಾಗಲಿದೆ.
2017ರ ಚುನಾವಣೆಯಲ್ಲಿ ಈ 59 ಕ್ಷೇತ್ರಗಳ ಪೈಕಿ 51 ಕ್ಷೇತ್ರಗಳನ್ನು ಬಿಜೆಪಿ, 4 ಕ್ಷೇತ್ರಗಳನ್ನು ಸಮಾಜವಾದಿ ಪಕ್ಷ ಮತ್ತು 3 ಕ್ಷೇತ್ರಗಳನ್ನು ಬಹುಜನ ಸಮಾಜ ಪಕ್ಷ ಗೆದ್ದುಕೊಂಡಿತ್ತು. ಅಪ್ನಾ ದಳ್ 1 ಕ್ಷೇತ್ರವನ್ನು ಗೆದ್ದುಕೊಂಡಿತ್ತು.
PublicNext
23/02/2022 09:51 am