ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಹರ್ಷ ಕುಟುಂಬಕ್ಕೆ ಸಚಿವ ಅಶ್ವತ್ಥ್ ನಾರಾಯಣ್‌ರಿಂದ 10 ಲಕ್ಷ ರೂ. ನೆರವು

ಬೆಂಗಳೂರು: ಶಿವಮೊಗ್ಗದಲ್ಲಿ ಫೆ.20ರಂದು ದುಷ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು 10 ಲಕ್ಷ ರೂ. ನೆರವು ಘೋಷಿಸಿದ್ದಾರೆ.

ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, 'ಡಾ.ಸಿ.ಎನ್ ಅಶ್ವತ್ಥ್ ನಾರಾಯಣ್ ಫೌಂಡೇಶನ್‌ನಿಂದ ಪರಿಹಾರದ ಮೊತ್ತ ನೀಡಲಾಗುವುದು. ಹರ್ಷ ಈ ದೇಶ ಮತ್ತು ಸಮಾಜಕ್ಕಾಗಿ ತನ್ನ ಪ್ರಾಣವನ್ನೇ ಸಮರ್ಪಿಸಿದ್ದಾನೆ. ಇಂತಹ ಸಂಕಷ್ಟದ ಸಮಯದಲ್ಲಿ ಆತನ ಕುಟುಂಬದ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯವಾಗಿದೆ. ಘೋಷಿಸಿರುವ ಹಣವನ್ನು ಹರ್ಷನ ತಾಯಿಯವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು' ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

24/02/2022 07:17 am

Cinque Terre

45.12 K

Cinque Terre

3