ಲಕ್ನೋ: ಉತ್ತರ ಪ್ರದೇಶದಲ್ಲಿ ಇಂದು ಐದನೇ ಹಂತದ ಮತದಾನ ನಡೆಯುತ್ತಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಪಕ್ಷಗಳ ನಡುವೆ ಪರಸ್ಪರ ಆರೋಪ ಪ್ರತ್ಯಾರೋಪ ಹೆಚ್ಚಾಗಿದೆ. ಈ ಮಧ್ಯೆ ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಪರಸ್ಪರ ಪ್ರಶಂಸಿದ್ದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.
'ಮಾಯಾವತಿ ಅವರು ಈಗಲೂ ಪ್ರಸ್ತುತ'ರಾಗಿದ್ದಾರೆ ಎಂಬುದಾಗಿ ಸಂದರ್ಶನವೊಂದರಲ್ಲಿ ಅಮಿತ್ ಶಾ ಹೇಳಿದ್ದರು. ಈ ವಿಚಾರವಾಗಿ ಮಾಧ್ಯಮಗಳಿಗೆ ಮಾತನಾಡಿರುವ ಮಾಯಾವತಿ ಅವರು ಅಮಿತ್ ಶಾ ಅವರಿಗೆ ಮಾಯಾವತಿ ಕೂಡ ಧನ್ಯವಾದ ತಿಳಿಸಿದ್ದಾರೆ. 'ಬಿಎಸ್‌ಪಿ ಪ್ರಸ್ತುತವಾಗಿದೆ ಎಂಬ ಸತ್ಯವನ್ನು ಒಪ್ಪಿಕೊಂಡಿದ್ದು ಶಾ ಅವರ ದೊಡ್ಡತನವನ್ನು ತೋರಿಸುತ್ತದೆ' ಎಂದು ಹೇಳಿದ್ದಾರೆ.
PublicNext
27/02/2022 03:32 pm