ಶ್ರೀನಗರ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆಪ್ತ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಅವರ ಸೋದರಳಿಯ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಮಾಜಿ ಕೇಂದ್ರ ಸಚಿವ ಅಶ್ವನಿ ಕುಮಾರ್ ಬೆನ್ನಲ್ಲೇ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರ ಸೋದರಳಿಯ ಮುಬಾಶರ್ ಆಜಾದ್ ಅವರು ಬಿಜೆಪಿ ಸೇರಿದ್ದಾರೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸಗಳನ್ನು ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಹಾಡಿಹೊಗಳಿದ್ದರು. ಈ ಬೆನ್ನಲ್ಲೇ ಅವರ ಸೋದರಳಿಯ ಮುಬಾಶರ್ ಆಜಾದ್ ಅವರು ಜಮ್ಮುವಿನ ತ್ರಿಕೂಟ ನಗರದಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
PublicNext
27/02/2022 07:12 pm