ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಡಿಯೂರಪ್ಪ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ: ಬೊಮ್ಮಾಯಿ

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಮಾರ್ಗದರ್ಶನದಲ್ಲಿಯೇ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಿದ್ದೇವೆ. ಈ ಮೂಲಕ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಭಾನುವಾರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಸಿಎಂ ಬೊಮ್ಮಾಯಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಹಿರಿಯ ನಾಯಕರಾದ ಯಡಿಯೂರಪ್ಪ ಅವರು ಹೋರಾಟದಿಂದ ಮೇಲೆ ಬಂದವರು. ರೈತರು, ಬಡವರ ಪರ ಇರುವವರು ಮತ್ತು ಅವರೊಂದಿಗೆ ಇಡೀ ನಾಡಿನ ಜನತೆ ಇದ್ದಾರೆ. ಮುಖ್ಯಮಂತ್ರಿಯಾಗಿದ್ದ ವೇಳೆ ಹಲವು ಜನಪರ ಕೆಲಸ ಮಾಡಿದ್ದಾರೆ. ಸೈಕಲ್‌ ವಿತರಣೆ, ಭಾಗ್ಯಲಕ್ಷ್ಮೇ ಯೋಜನೆ, ರೈತರಿಗೆ ಉಚಿತ ವಿದ್ಯುತ್‌ ನೀಡಿ ರೈತಪರ ಕೆಲಸ ಮಾಡಿದ್ದಾರೆ. ನೀರಾವರಿ ಯೋಜನೆಗಳು, ಸಂಧ್ಯಾ ಸುರಕ್ಷಾ ಯೋಜನೆ ಕೊಟ್ಟಿದ್ದಾರೆ.

ಏಕಾಂಗಿಯಾಗಿ ಹೋರಾಟ ಆರಂಭಿಸಿ ಇಡೀ ಕರ್ನಾಟಕಕ್ಕೆ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. ಮಾತಿಗೆ ತಪ್ಪದ ವ್ಯಕ್ತಿ ಎಂದು ಯಾರಾದರೂ ಇದ್ದರೆ ಅದು ಯಡಿಯೂರಪ್ಪ ಅವರಾಗಿದ್ದಾರೆ. ಅವರ ಆಶೀರ್ವಾದದಿಂದ ನಾವೆಲ್ಲ ಮುನ್ನಡೆಯುತ್ತೇವೆ ಬೊಮ್ಮಾಯಿ ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

28/02/2022 07:44 am

Cinque Terre

44.54 K

Cinque Terre

4

ಸಂಬಂಧಿತ ಸುದ್ದಿ