ದಾವಣಗೆರೆ: ಕಾಂಗ್ರೆಸ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಕಂದಾಯ ಸಚಿವ ಆರ್. ಅಶೋಕ್, ಕಾಂಗ್ರೆಸ್‌ಗೆ ಕೆಟ್ಟ ಕಾಲ ಶುರುವಾಗಿದೆ ಎಂದಿದ್ದಾರೆ.
ಹೊನ್ನಾಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮೇಕೆದಾಟು ಪಾದಯಾತ್ರೆ ಆರಂಭ ಮಾಡಿ ಕೋವಿಡ್ ಹಿನ್ನೆಲೆ ಅರ್ಧಕ್ಕೆ ನಿಂತು ಹೋಯಿತು. ಈಗ ಉಕ್ರೇನ್ ನಲ್ಲಿ ನಮ್ಮ ಮಕ್ಕಳು ಸಂಕಷ್ಟದಲ್ಲಿದ್ದಾರೆ. ಕಾಂಗ್ರೆಸ್‌ನವರು ಬಿರಿಯಾನಿ ತಿನ್ನುತ್ತಾ ಜೊತೆಗೆ ಡಾನ್ಸ್ ಮಾಡುತ್ತಾ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಮೇಕೆದಾಟು ವಿಚಾರ ಕೋರ್ಟ್‌ನಲ್ಲಿ ಇದೆ. ಈ ವಿಚಾರವನ್ನು ಸೂಕ್ಷ್ಮವಾಗಿ ಬಗೆಹರಿಸಬೇಕು. ಕಾಂಗ್ರೆಸ್ ಪಾದಯಾತ್ರೆಯಿಂದ ತಮಿಳುನಾಡು ಕೈಗೆ ಅಸ್ತ್ರ ಕೊಟ್ಟಂತಾಗುತ್ತದೆ. ಈ ಹಿಂದೆ ಎಸ್.ಎಂ ಕೃಷ್ಣ ಅವರು ಸಿಎಂ ಆಗಿದ್ದಾಗ ಕಾವೇರಿ ವಿಚಾರದಲ್ಲಿ ಪಾದಯಾತ್ರೆ ಮಾಡಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತು. ಆಗ ಮೇಕೆದಾಟು ಅಂದ್ರೆ ಕುಡಿಯುವ ನೀರು ಎಂದು ಕೋರ್ಡ್ ಛೀಮಾರಿ ಹಾಕಿತ್ತು. ಆದ್ರೆ ಇವರು ನೀರಾವರಿಗೂ ಕೊಡುವುದಾಗಿ ಹೇಳುತ್ತಿದ್ದಾರೆ. ಇಷ್ಟಕ್ಕೂ ಇವರ ಮಾತು ಕೇಂದ್ರ, ರಾಜ್ಯ ಸರ್ಕಾರಗಳು ಕೇಳುತ್ತಿಲ್ಲ. ಯಾವ ಪುರುಷಾರ್ಥಕ್ಕೆ ಈ ಯಾತ್ರೆ ಎಂದು ಆರ್. ಅಶೋಕ್ ಪ್ರಶ್ನಿಸಿದ್ದಾರೆ.
PublicNext
28/02/2022 05:03 pm