ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

3 ದಿನ ಸಂಚಾರ ಸಮಸ್ಯೆ ಸಹಿಸಿಕೊಂಡ್ರೆ 50 ವರ್ಷ ನೀರಿನ ಸಮಸ್ಯೆ ಇರೋದಿಲ್ಲ:ಡಿಕೆಶಿ

ಬೆಂಗಳೂರು: ಮೂರು ದಿನ ಸಂಚಾರ ಸಮಸ್ಯೆ ಸಹಿಸಿಕೊಂಡರೆ ಮುಂದಿನ 50 ವರ್ಷಗಳವರೆಗೆ ಕುಡಿಯುವ ನೀರಿನ ಸಮಸ್ಯೆ ಇರೋದಿಲ್ಲ. ಅದಕ್ಕಾಗಿ ಸದ್ಯ ನಡೆಯುತ್ತಿರವ ಪಾದಯಾತ್ರೆಯಲ್ಲಿ ಎಲ್ಲರೂ ಬಂದು ಪಾಲ್ಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 3ದಿನ ಬೆಂಗಳೂರಿನಲ್ಲಿ ಸ್ವಲ್ಪ ಟ್ರಾಫಿಕ್ ಸಮಸ್ಯೆ ಆಗುತ್ತದೆ. ಇದಕ್ಕಾಗಿ ನಾನು ಬೆಂಗಳೂರು ನಗರದ ಜನತೆಯ ಕ್ಷಮಾಪಣೆ ಕೇಳುತ್ತೇನೆ. ಆದರೆ ಮುಂದಿನ 50ವರ್ಷಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆ ಆಗೋದಿಲ್ಲ. ಹೀಗಾಗಿ ಸಂಚಾರ ಸಮಸ್ಯೆಯನ್ನು ಜನತೆ ಸಹಿಸಿಕೊಳ್ಳಬೇಕು ಎಂದಿದ್ದಾರೆ.

ಪಾದಯಾತ್ರೆ ಬೆಂಗಳೂರಿಗೆ ಕಾಲಿಟ್ಟಿದೆ. ಪೊಲೀಸರು ನಮಗೆ ಬೆಂಗಾವಲಾಗಿ ನಿಂತಿದ್ದಾರೆ. ಬಿಬಿಎಂಪಿ ಕಮಿಷನರ್ ನಮ್ಮ ಬ್ಯಾನರ್ ಸ್ವಲ್ಪ ಕೀಳಿಸಿದ್ದಾರೆ. ಆದರೆ ಅಷ್ಟರಲ್ಲಿ ನಮ್ಮ ನಾಯಕರು ಗಲಾಟೆ ಮಾಡಿ ಉಳಿಸಿದ್ದಾರೆ. ನಮ್ಮ ಬ್ಯಾನರ್ ಕಿತ್ತರೆ ರಾತ್ರಿ ಬಿಜೆಪಿ ನಾಯಕರ ಬ್ಯಾನರ್ ಎಲ್ಲೆಲ್ಲಿ ಹಾಕಿದ್ದಾರೆ, ಅಲ್ಲೆಲ್ಲ ಕಿತ್ತು ಹಾಕಲು ಕಾರ್ಯಕರ್ತರಿಗೆ ಹೇಳಿದ್ದೆ. ಆ ಮೇಲೆ ಬಿಬಿಎಂಪಿಯವರು ಸುಮ್ಮನಾಗಿದ್ದಾರೆ. ಗೌರವ್ ಗುಪ್ತ ಬಿಬಿಎಂಪಿ ಬೋರ್ಡ್ ತಗೆದು ಬಿಜೆಪಿ ಕಚೇರಿ ಎಂದು ಬೋರ್ಡ್ ಹಾಕಿಕೊಳ್ಳಲಿ ಎಂದ ಡಿಕೆಶಿ ಕಿಡಿಕಾರಿದ್ದಾರೆ.

Edited By : Nagaraj Tulugeri
PublicNext

PublicNext

01/03/2022 12:30 pm

Cinque Terre

68.17 K

Cinque Terre

25

ಸಂಬಂಧಿತ ಸುದ್ದಿ